7ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ, ಯೆಹೋವನವೇ, ಎಂದು ಹೇಳಿ ಆತನನ್ನು ಘನಪಡಿಸಿರಿ.
8ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; ಕಾಣಿಕೆಯೊಡನೆ ಆತನ ಅಂಗಳಗಳಿಗೆ ಬನ್ನಿರಿ.
9ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ; ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಭಯಭಕ್ತಿಯಿಂದಿರಿ.
10ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.