1ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.
2ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ.
3ಬೆಂಕಿಯು ಆತನ ಮುಂದೆ ಹೋಗಿ, ಸುತ್ತಲೂ ಆವರಿಸಿ ಆತನ ವೈರಿಗಳನ್ನು ದಹಿಸಿಬಿಡುತ್ತದೆ.
4ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು; ಭೂಮಿಯು ಅದನ್ನು ಕಂಡು ನಡುಗಿತು.
5ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಪರ್ವತಗಳು ಮೇಣದಂತೆ ಕರಗಿಹೋದವು.
6ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು.