Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 97

ಕೀರ್ತ 97:2-9

Help us?
Click on verse(s) to share them!
2ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ.
3ಬೆಂಕಿಯು ಆತನ ಮುಂದೆ ಹೋಗಿ, ಸುತ್ತಲೂ ಆವರಿಸಿ ಆತನ ವೈರಿಗಳನ್ನು ದಹಿಸಿಬಿಡುತ್ತದೆ.
4ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು; ಭೂಮಿಯು ಅದನ್ನು ಕಂಡು ನಡುಗಿತು.
5ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಪರ್ವತಗಳು ಮೇಣದಂತೆ ಕರಗಿಹೋದವು.
6ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು.
7ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.
8ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ ಚೀಯೋನ್ ಪಟ್ಟಣವು ಹರ್ಷಿಸಿತು; ಯೆಹೂದ ಪ್ರಾಂತ್ಯದ ಊರುಗಳು ಸಂತೋಷಿಸಿದವು.
9ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.

Read ಕೀರ್ತ 97ಕೀರ್ತ 97
Compare ಕೀರ್ತ 97:2-9ಕೀರ್ತ 97:2-9