5ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಪರ್ವತಗಳು ಮೇಣದಂತೆ ಕರಗಿಹೋದವು.
6ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು.
7ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.
8ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ ಚೀಯೋನ್ ಪಟ್ಟಣವು ಹರ್ಷಿಸಿತು; ಯೆಹೂದ ಪ್ರಾಂತ್ಯದ ಊರುಗಳು ಸಂತೋಷಿಸಿದವು.
9ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.
10ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
11ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು, ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ.
12ನೀತಿವಂತರೇ, ಯೆಹೋವನಲ್ಲಿ ಆನಂದಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.