4ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಜಯಘೋಷಮಾಡಿರಿ; ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ.
5ಕಿನ್ನರಿಯೊಡನೆ ಯೆಹೋವನನ್ನು ಸ್ತುತಿಸಿರಿ; ಕಿನ್ನರಿಯನ್ನು ನುಡಿಸುತ್ತಾ ಭಜಿಸಿರಿ.
6ತುತ್ತೂರಿಗಳನ್ನೂ, ಕೊಂಬನ್ನೂ ಊದುತ್ತಾ, ಯೆಹೋವರಾಜನಿಗೆ ಜಯಘೋಷಮಾಡಿರಿ.
7ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ, ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ.
8ನದಿಗಳು ಚಪ್ಪಾಳೆ ಹೊಡೆಯಲಿ; ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ.