12ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು.
13ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.
14ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು.
15ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.
16ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ