4ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ; ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತಿ.
5ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ, ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ.
6ಶತ್ರುಗಳು ನಿಶ್ಶೇಷವಾದರು; ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು. ಅವರ ಸ್ಮರಣೆಯೇ ಇಲ್ಲವಾಯಿತು.
7ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ.
8ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು; ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು.
9ಯೆಹೋವನು ಕುಗ್ಗಿದವರಿಗೆ ಆಶ್ರಯವೂ, ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.
10ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.