Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಕೀರ್ತ - ಕೀರ್ತ 9

ಕೀರ್ತ 9:6-10

Help us?
Click on verse(s) to share them!
6ಶತ್ರುಗಳು ನಿಶ್ಶೇಷವಾದರು; ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು. ಅವರ ಸ್ಮರಣೆಯೇ ಇಲ್ಲವಾಯಿತು.
7ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ.
8ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು; ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು.
9ಯೆಹೋವನು ಕುಗ್ಗಿದವರಿಗೆ ಆಶ್ರಯವೂ, ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.
10ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.

Read ಕೀರ್ತ 9ಕೀರ್ತ 9
Compare ಕೀರ್ತ 9:6-10ಕೀರ್ತ 9:6-10