Text copied!
Bibles in Kannada

ಕೀರ್ತ 9:6-10 in Kannada

Help us?

ಕೀರ್ತ 9:6-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಶತ್ರುಗಳು ನಿಶ್ಶೇಷವಾದರು; ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು. ಅವರ ಸ್ಮರಣೆಯೇ ಇಲ್ಲವಾಯಿತು.
7 ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ.
8 ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು; ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು.
9 ಯೆಹೋವನು ಕುಗ್ಗಿದವರಿಗೆ ಆಶ್ರಯವೂ, ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.
10 ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.
ಕೀರ್ತ 9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019