Text copied!
Bibles in Kannada

ಜ್ಞಾನೋ 10:11-26 in Kannada

Help us?

ಜ್ಞಾನೋ 10:11-26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಶಿಷ್ಟನ ಬಾಯಿ ಜೀವದ ಬುಗ್ಗೆ, ದುಷ್ಟನ ಬಾಯಲ್ಲಿ ಬಲಾತ್ಕಾರವು ತುಂಬಿ ತುಳುಕುತ್ತದೆ.
12 ದ್ವೇಷವು ಜಗಳಗಳನ್ನೆಬ್ಬಿಸುತ್ತದೆ, ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.
13 ವಿವೇಕಿಯ ತುಟಿಗಳಿಂದ ಜ್ಞಾನ, ಬುದ್ಧಿಹೀನನ ಬೆನ್ನಿಗೆ ಬೆತ್ತ.
14 ಜ್ಞಾನಿಗಳು ತಿಳಿದ ಸಂಗತಿಯನ್ನು ಹೊರಪಡಿಸುವುದಿಲ್ಲ, ಮೂರ್ಖನ ಭಾಷಣ ನಾಶನಕ್ಕೆ ಸಮೀಪ.
15 ಐಶ್ವರ್ಯವಂತನಿಗೆ ಐಶ್ವರ್ಯವು ಬಲವಾದ ಕೋಟೆ, ಬಡವನಿಗೆ ಅವನ ಬಡತನವೇ ನಾಶನ.
16 ಶಿಷ್ಟನ ದುಡಿತ ಜೀವಾಸ್ಪದ, ದುಷ್ಟನ ಆದಾಯ ಪಾಪಾಸ್ಪದ.
17 ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು, ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು.
18 ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ, ಚಾಡಿಗಾರನು ಜ್ಞಾನಹೀನ.
19 ಮಾತಾಳಿಗೆ ಪಾಪ ತಪ್ಪದು, ಮೌನಿಯು ವಿವೇಕಿ.
20 ಶಿಷ್ಟರ ನಾಲಿಗೆ ಚೊಕ್ಕ ಬೆಳ್ಳಿ, ದುಷ್ಟನ ಹೃದಯ ಮೌಲ್ಯವಿಲ್ಲದ್ದು.
21 ಶಿಷ್ಟರ ಭಾಷಣ ಬಹುಜನ ಪೋಷಣ, ಬುದ್ಧಿಯ ಕೊರತೆ ಮೂರ್ಖರ ನಾಶನ.
22 ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.
23 ಅವಿವೇಕಿಗೆ ಕುಯುಕ್ತಿ ವಿನೋದ ವಿವೇಕಿಗೆ ಜ್ಞಾನ ವಿನೋದ.
24 ದುಷ್ಟನಿಗೆ ಶಂಕಿಸಿದ್ದೇ ಸಂಭವಿಸುವುದು, ಶಿಷ್ಟನಿಗೆ ಇಷ್ಟವು ಲಭಿಸುವುದು.
25 ಬಿರುಗಾಳಿ ಬೀಸಿದರೆ ದುಷ್ಟನು ಎಲ್ಲೋ! ಶಿಷ್ಟನು ಶಾಶ್ವತವಾದ ಕಟ್ಟಡ.
26 ಹಲ್ಲುಗಳಿಗೆ ಹುಳಿಯೂ, ಕಣ್ಣುಗಳಿಗೆ ಹೊಗೆಯೂ ಹೇಗೋ, ಯಜಮಾನನಿಗೆ ಸೋಮಾರಿಯು ಹಾಗೆ.
ಜ್ಞಾನೋ 10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019