17ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು, ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು.
18ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ, ಚಾಡಿಗಾರನು ಜ್ಞಾನಹೀನ.
19ಮಾತಾಳಿಗೆ ಪಾಪ ತಪ್ಪದು, ಮೌನಿಯು ವಿವೇಕಿ.
20ಶಿಷ್ಟರ ನಾಲಿಗೆ ಚೊಕ್ಕ ಬೆಳ್ಳಿ, ದುಷ್ಟನ ಹೃದಯ ಮೌಲ್ಯವಿಲ್ಲದ್ದು.
21ಶಿಷ್ಟರ ಭಾಷಣ ಬಹುಜನ ಪೋಷಣ, ಬುದ್ಧಿಯ ಕೊರತೆ ಮೂರ್ಖರ ನಾಶನ.
22ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.
23ಅವಿವೇಕಿಗೆ ಕುಯುಕ್ತಿ ವಿನೋದ ವಿವೇಕಿಗೆ ಜ್ಞಾನ ವಿನೋದ.
24ದುಷ್ಟನಿಗೆ ಶಂಕಿಸಿದ್ದೇ ಸಂಭವಿಸುವುದು, ಶಿಷ್ಟನಿಗೆ ಇಷ್ಟವು ಲಭಿಸುವುದು.