Text copied!
Bibles in Kannada

ಜ್ಞಾನೋ 10:18-30 in Kannada

Help us?

ಜ್ಞಾನೋ 10:18-30 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ, ಚಾಡಿಗಾರನು ಜ್ಞಾನಹೀನ.
19 ಮಾತಾಳಿಗೆ ಪಾಪ ತಪ್ಪದು, ಮೌನಿಯು ವಿವೇಕಿ.
20 ಶಿಷ್ಟರ ನಾಲಿಗೆ ಚೊಕ್ಕ ಬೆಳ್ಳಿ, ದುಷ್ಟನ ಹೃದಯ ಮೌಲ್ಯವಿಲ್ಲದ್ದು.
21 ಶಿಷ್ಟರ ಭಾಷಣ ಬಹುಜನ ಪೋಷಣ, ಬುದ್ಧಿಯ ಕೊರತೆ ಮೂರ್ಖರ ನಾಶನ.
22 ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.
23 ಅವಿವೇಕಿಗೆ ಕುಯುಕ್ತಿ ವಿನೋದ ವಿವೇಕಿಗೆ ಜ್ಞಾನ ವಿನೋದ.
24 ದುಷ್ಟನಿಗೆ ಶಂಕಿಸಿದ್ದೇ ಸಂಭವಿಸುವುದು, ಶಿಷ್ಟನಿಗೆ ಇಷ್ಟವು ಲಭಿಸುವುದು.
25 ಬಿರುಗಾಳಿ ಬೀಸಿದರೆ ದುಷ್ಟನು ಎಲ್ಲೋ! ಶಿಷ್ಟನು ಶಾಶ್ವತವಾದ ಕಟ್ಟಡ.
26 ಹಲ್ಲುಗಳಿಗೆ ಹುಳಿಯೂ, ಕಣ್ಣುಗಳಿಗೆ ಹೊಗೆಯೂ ಹೇಗೋ, ಯಜಮಾನನಿಗೆ ಸೋಮಾರಿಯು ಹಾಗೆ.
27 ಯೆಹೋವನಿಗೆ ಭಯಪಡುವವರ ದಿನಗಳಿಗೆ ವೃದ್ಧಿ, ದುಷ್ಟರ ವರ್ಷಗಳು ಅಲ್ಪ.
28 ಶಿಷ್ಟನ ನಂಬಿಕೆಗೆ ಆನಂದವು ಫಲ, ದುಷ್ಟನ ನಿರೀಕ್ಷೆ ನಿಷ್ಫಲ.
29 ಯೆಹೋವನು ಸನ್ಮಾರ್ಗಿಗೆ ಆಶ್ರಯ, ಕೆಡುಕನಿಗೆ ನಾಶನ.
30 ಶಿಷ್ಟರು ಎಂದಿಗೂ ಕದಲರು, ದುಷ್ಟರು ದೇಶದಲ್ಲಿ ನಿಲ್ಲರು.
ಜ್ಞಾನೋ 10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019