Text copied!
Bibles in Kannada

ಜ್ಞಾನೋ 10:2-10 in Kannada

Help us?

ಜ್ಞಾನೋ 10:2-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅನ್ಯಾಯದ ಸಂಪತ್ತು ವ್ಯರ್ಥ, ಧರ್ಮವು ಮೃತ್ಯುವಿನಿಂದ ರಕ್ಷಿಸುವಂತದ್ದು.
3 ಯೆಹೋವನು ನೀತಿವಂತರನ್ನು ಹಸಿವೆಗೊಳಿಸನು, ದುಷ್ಟನ ಆಶೆಯನ್ನು ಭಂಗಪಡಿಸುತ್ತಾನೆ.
4 ಜೋಲುಗೈ ದಾರಿದ್ರ್ಯ, ಚುರುಕು ಕೈ ತರುವುದು ಐಶ್ವರ್ಯ.
5 ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು, ಕೊಯ್ಲಿನಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು.
6 ಶಿಷ್ಟನ ತಲೆ ಆಶೀರ್ವಾದದ ನೆಲೆ, ದುಷ್ಟನ ಬಾಯಿಗೆ ಬಲಾತ್ಕಾರವೇ ಮುಚ್ಚಳ.
7 ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ, ದುಷ್ಟರ ನಾಮವು ನಿರ್ನಾಮಕಾಸ್ಪದ.
8 ಜ್ಞಾನಹೃದಯನು ಆಜ್ಞೆಗಳನ್ನು ಪಾಲಿಸುವನು, ಹರಟೆಯ ಮೂರ್ಖನು ಕೆಡವಲ್ಪಡುವನು.
9 ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು.
10 ಕಣ್ಣು ಮಿಟಕಿಸುವವನು ಕಷ್ಟಕ್ಕೆ ಕಾರಣನು, ಧೈರ್ಯದಿಂದ ಗದರಿಸುವವನು ಸಮಾಧಾನಕರನು.
ಜ್ಞಾನೋ 10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019