Text copied!
Bibles in Kannada

ಜ್ಞಾನೋ 10:2-11 in Kannada

Help us?

ಜ್ಞಾನೋ 10:2-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅನ್ಯಾಯದ ಸಂಪತ್ತು ವ್ಯರ್ಥ, ಧರ್ಮವು ಮೃತ್ಯುವಿನಿಂದ ರಕ್ಷಿಸುವಂತದ್ದು.
3 ಯೆಹೋವನು ನೀತಿವಂತರನ್ನು ಹಸಿವೆಗೊಳಿಸನು, ದುಷ್ಟನ ಆಶೆಯನ್ನು ಭಂಗಪಡಿಸುತ್ತಾನೆ.
4 ಜೋಲುಗೈ ದಾರಿದ್ರ್ಯ, ಚುರುಕು ಕೈ ತರುವುದು ಐಶ್ವರ್ಯ.
5 ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು, ಕೊಯ್ಲಿನಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು.
6 ಶಿಷ್ಟನ ತಲೆ ಆಶೀರ್ವಾದದ ನೆಲೆ, ದುಷ್ಟನ ಬಾಯಿಗೆ ಬಲಾತ್ಕಾರವೇ ಮುಚ್ಚಳ.
7 ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ, ದುಷ್ಟರ ನಾಮವು ನಿರ್ನಾಮಕಾಸ್ಪದ.
8 ಜ್ಞಾನಹೃದಯನು ಆಜ್ಞೆಗಳನ್ನು ಪಾಲಿಸುವನು, ಹರಟೆಯ ಮೂರ್ಖನು ಕೆಡವಲ್ಪಡುವನು.
9 ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು.
10 ಕಣ್ಣು ಮಿಟಕಿಸುವವನು ಕಷ್ಟಕ್ಕೆ ಕಾರಣನು, ಧೈರ್ಯದಿಂದ ಗದರಿಸುವವನು ಸಮಾಧಾನಕರನು.
11 ಶಿಷ್ಟನ ಬಾಯಿ ಜೀವದ ಬುಗ್ಗೆ, ದುಷ್ಟನ ಬಾಯಲ್ಲಿ ಬಲಾತ್ಕಾರವು ತುಂಬಿ ತುಳುಕುತ್ತದೆ.
ಜ್ಞಾನೋ 10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019