2ಅನ್ಯಾಯದ ಸಂಪತ್ತು ವ್ಯರ್ಥ, ಧರ್ಮವು ಮೃತ್ಯುವಿನಿಂದ ರಕ್ಷಿಸುವಂತದ್ದು.
3ಯೆಹೋವನು ನೀತಿವಂತರನ್ನು ಹಸಿವೆಗೊಳಿಸನು, ದುಷ್ಟನ ಆಶೆಯನ್ನು ಭಂಗಪಡಿಸುತ್ತಾನೆ.
4ಜೋಲುಗೈ ದಾರಿದ್ರ್ಯ, ಚುರುಕು ಕೈ ತರುವುದು ಐಶ್ವರ್ಯ.
5ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು, ಕೊಯ್ಲಿನಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು.
6ಶಿಷ್ಟನ ತಲೆ ಆಶೀರ್ವಾದದ ನೆಲೆ, ದುಷ್ಟನ ಬಾಯಿಗೆ ಬಲಾತ್ಕಾರವೇ ಮುಚ್ಚಳ.
7ಶಿಷ್ಟರ ಸ್ಮರಣೆಯು ಆಶೀರ್ವಾದಕ್ಕಾಸ್ಪದ, ದುಷ್ಟರ ನಾಮವು ನಿರ್ನಾಮಕಾಸ್ಪದ.
8ಜ್ಞಾನಹೃದಯನು ಆಜ್ಞೆಗಳನ್ನು ಪಾಲಿಸುವನು, ಹರಟೆಯ ಮೂರ್ಖನು ಕೆಡವಲ್ಪಡುವನು.
9ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು.
10ಕಣ್ಣು ಮಿಟಕಿಸುವವನು ಕಷ್ಟಕ್ಕೆ ಕಾರಣನು, ಧೈರ್ಯದಿಂದ ಗದರಿಸುವವನು ಸಮಾಧಾನಕರನು.
11ಶಿಷ್ಟನ ಬಾಯಿ ಜೀವದ ಬುಗ್ಗೆ, ದುಷ್ಟನ ಬಾಯಲ್ಲಿ ಬಲಾತ್ಕಾರವು ತುಂಬಿ ತುಳುಕುತ್ತದೆ.
12ದ್ವೇಷವು ಜಗಳಗಳನ್ನೆಬ್ಬಿಸುತ್ತದೆ, ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.