2ಅನ್ಯಾಯದ ಸಂಪತ್ತು ವ್ಯರ್ಥ, ಧರ್ಮವು ಮೃತ್ಯುವಿನಿಂದ ರಕ್ಷಿಸುವಂತದ್ದು.
3ಯೆಹೋವನು ನೀತಿವಂತರನ್ನು ಹಸಿವೆಗೊಳಿಸನು, ದುಷ್ಟನ ಆಶೆಯನ್ನು ಭಂಗಪಡಿಸುತ್ತಾನೆ.
4ಜೋಲುಗೈ ದಾರಿದ್ರ್ಯ, ಚುರುಕು ಕೈ ತರುವುದು ಐಶ್ವರ್ಯ.
5ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು, ಕೊಯ್ಲಿನಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು.
6ಶಿಷ್ಟನ ತಲೆ ಆಶೀರ್ವಾದದ ನೆಲೆ, ದುಷ್ಟನ ಬಾಯಿಗೆ ಬಲಾತ್ಕಾರವೇ ಮುಚ್ಚಳ.