Text copied!
Bibles in Kannada

ಜ್ಞಾನೋ 10:9-14 in Kannada

Help us?

ಜ್ಞಾನೋ 10:9-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು.
10 ಕಣ್ಣು ಮಿಟಕಿಸುವವನು ಕಷ್ಟಕ್ಕೆ ಕಾರಣನು, ಧೈರ್ಯದಿಂದ ಗದರಿಸುವವನು ಸಮಾಧಾನಕರನು.
11 ಶಿಷ್ಟನ ಬಾಯಿ ಜೀವದ ಬುಗ್ಗೆ, ದುಷ್ಟನ ಬಾಯಲ್ಲಿ ಬಲಾತ್ಕಾರವು ತುಂಬಿ ತುಳುಕುತ್ತದೆ.
12 ದ್ವೇಷವು ಜಗಳಗಳನ್ನೆಬ್ಬಿಸುತ್ತದೆ, ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.
13 ವಿವೇಕಿಯ ತುಟಿಗಳಿಂದ ಜ್ಞಾನ, ಬುದ್ಧಿಹೀನನ ಬೆನ್ನಿಗೆ ಬೆತ್ತ.
14 ಜ್ಞಾನಿಗಳು ತಿಳಿದ ಸಂಗತಿಯನ್ನು ಹೊರಪಡಿಸುವುದಿಲ್ಲ, ಮೂರ್ಖನ ಭಾಷಣ ನಾಶನಕ್ಕೆ ಸಮೀಪ.
ಜ್ಞಾನೋ 10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019