Text copied!
Bibles in Kannada

ಜ್ಞಾನೋ 11:1-10 in Kannada

Help us?

ಜ್ಞಾನೋ 11:1-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೋಸದ ತಕ್ಕಡಿ ಯೆಹೋವನಿಗೆ ಅಸಹ್ಯ, ನ್ಯಾಯದ ತೂಕ ಆತನಿಗೆ ಸಂತೋಷ.
2 ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ, ದೀನತೆಯಲ್ಲಿ ಸುಜ್ಞಾನ.
3 ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ, ವಂಚಕರಿಗೆ ವಕ್ರತೆಯು ನಾಶನ.
4 ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ.
5 ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವುದು, ದುಷ್ಟನು ತನ್ನ ದೋಷದಿಂದಲೇ ಬಿದ್ದುಹೋಗುವನು.
6 ಧರ್ಮವು ಯಥಾರ್ಥವಂತರನ್ನು ಉದ್ಧರಿಸುವುದು, ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು.
7 ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವುದು, ಬಲದ ಮೇಲಣ ನಂಬಿಕೆಯು ಬಿದ್ದುಹೋಗುವುದು.
8 ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು, ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು.
9 ಧರ್ಮಭ್ರಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು, ಶಿಷ್ಟನು ತಿಳಿವಳಿಕೆಯಿಂದ ಉದ್ಧಾರವಾಗುವನು.
10 ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ, ದುರ್ಜನರು ಹಾಳಾದರೆ ಜಯಘೋಷ.
ಜ್ಞಾನೋ 11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019