1ಮೋಸದ ತಕ್ಕಡಿ ಯೆಹೋವನಿಗೆ ಅಸಹ್ಯ, ನ್ಯಾಯದ ತೂಕ ಆತನಿಗೆ ಸಂತೋಷ.
2ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ, ದೀನತೆಯಲ್ಲಿ ಸುಜ್ಞಾನ.
3ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ, ವಂಚಕರಿಗೆ ವಕ್ರತೆಯು ನಾಶನ.
4ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ.
5ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವುದು, ದುಷ್ಟನು ತನ್ನ ದೋಷದಿಂದಲೇ ಬಿದ್ದುಹೋಗುವನು.
6ಧರ್ಮವು ಯಥಾರ್ಥವಂತರನ್ನು ಉದ್ಧರಿಸುವುದು, ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು.