12ನೆರೆಯವನನ್ನು ಹೀನೈಸುವವನು ಬುದ್ಧಿಹೀನನು, ವಿವೇಕಿಯು ಮೌನವಾಗಿರುವನು.
13ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ನಂಬಿಗಸ್ತನು ಸಂಗತಿಗಳನ್ನು ಗುಪ್ತವಾಗಿಡುವನು.
14ಉಚಿತಾಲೋಚನೆಯಿಲ್ಲದ ಕಡೆ ಪ್ರಜೆಯು ಬಿದ್ದು ಹೋಗುವುದು, ಬಹು ಮಂದಿ ಸಮಾಲೋಚಕರು ಇರುವಲ್ಲಿ ಸಂರಕ್ಷಣೆ ಇರುವುದು.
15ಅನ್ಯನ ಸಾಲಕ್ಕೆ ಹೊಣೆಯಾದರೆ ಹಾನಿ, ಅಪರಿಚಿತನ ಹೊಣೆಗೆ ದೂರವಾದರೆ ನಿರ್ಭಯ.
16ದಯಾಳುವಾದ ಹೆಂಗಸು ಗೌರವವನ್ನು ಪಡೆಯುವಳು, ಬಲಾತ್ಕಾರಿಗಳು ಧನವನ್ನು ಮಾತ್ರ ಕೂಡಿಸಿಕೊಳ್ಳುವರು.
17ದಯಾಪರನಿಗೆ ಉಪಕಾರವಾಗುವುದು, ಕ್ರೂರನು ತನ್ನ ಶರೀರವನ್ನು ಹಿಂಸಿಸುವನು.
18ಅಧರ್ಮಿಯ ಸಂಬಳವು ಮೋಸ, ನೀತಿಯನ್ನು ಬಿತ್ತುವವನು ಲಾಭವನ್ನು ಪಡೆಯುವನು.