23ಸಜ್ಜನರ ಆಶೆಯು ಮಂಗಳಾಸ್ಪದ, ದುರ್ಜನರ ನಿರೀಕ್ಷೆಯು ರೋಷಾಸ್ಪದ.
24ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ, ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.
25ಉದಾರಿಯು ಪುಷ್ಟನಾಗುವನು, ನೀರು ಹಾಯಿಸುವವನಿಗೆ ನೀರು ಸಿಕ್ಕುವುದು.
26ಧಾನ್ಯವನ್ನು ಬಿಗಿಹಿಡಿಯುವವನ ಮೇಲೆ ಜನರ ಶಾಪ, ಮಾರುವವನ ತಲೆಯ ಮೇಲೆ ಆಶೀರ್ವಾದ.
27ಧರ್ಮಕ್ಕೆ ಆತುರಪಡುವವನಿಗೆ ದಯೆ, ಕೇಡನ್ನು ಹುಡುಕುವವನಿಗೆ ಕೇಡೇ.
28ಧನವನ್ನೇ ನಂಬಿದವನು ಬಿದ್ದುಹೋಗುವನು, ಸದ್ಧರ್ಮಿಯು ಕುಡಿಯ ಹಾಗೆ ಚಿಗುರುವನು.
29ತನ್ನ ಕುಟುಂಬವನ್ನು ಬಾಧಿಸುವವನಿಗೆ ಗಾಳಿಯೇ ಗಂಟು, ಮೂರ್ಖನು ಜ್ಞಾನವಂತನ ಅಧೀನದಲ್ಲಿ ಬಿದ್ದಿರುವನು;