Text copied!
Bibles in Kannada

ಜ್ಞಾನೋ 11:3-13 in Kannada

Help us?

ಜ್ಞಾನೋ 11:3-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ, ವಂಚಕರಿಗೆ ವಕ್ರತೆಯು ನಾಶನ.
4 ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ.
5 ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವುದು, ದುಷ್ಟನು ತನ್ನ ದೋಷದಿಂದಲೇ ಬಿದ್ದುಹೋಗುವನು.
6 ಧರ್ಮವು ಯಥಾರ್ಥವಂತರನ್ನು ಉದ್ಧರಿಸುವುದು, ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು.
7 ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವುದು, ಬಲದ ಮೇಲಣ ನಂಬಿಕೆಯು ಬಿದ್ದುಹೋಗುವುದು.
8 ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು, ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು.
9 ಧರ್ಮಭ್ರಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು, ಶಿಷ್ಟನು ತಿಳಿವಳಿಕೆಯಿಂದ ಉದ್ಧಾರವಾಗುವನು.
10 ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ, ದುರ್ಜನರು ಹಾಳಾದರೆ ಜಯಘೋಷ.
11 ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಉನ್ನತಿಗೆ ಬರುವುದು, ಕೆಟ್ಟವರ ಬಾಯಿಂದ ಕೆಡವಲ್ಪಡುವುದು.
12 ನೆರೆಯವನನ್ನು ಹೀನೈಸುವವನು ಬುದ್ಧಿಹೀನನು, ವಿವೇಕಿಯು ಮೌನವಾಗಿರುವನು.
13 ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ನಂಬಿಗಸ್ತನು ಸಂಗತಿಗಳನ್ನು ಗುಪ್ತವಾಗಿಡುವನು.
ಜ್ಞಾನೋ 11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019