Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 11

ಜ್ಞಾನೋ 11:4-22

Help us?
Click on verse(s) to share them!
4ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ.
5ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವುದು, ದುಷ್ಟನು ತನ್ನ ದೋಷದಿಂದಲೇ ಬಿದ್ದುಹೋಗುವನು.
6ಧರ್ಮವು ಯಥಾರ್ಥವಂತರನ್ನು ಉದ್ಧರಿಸುವುದು, ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು.
7ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವುದು, ಬಲದ ಮೇಲಣ ನಂಬಿಕೆಯು ಬಿದ್ದುಹೋಗುವುದು.
8ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು, ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು.
9ಧರ್ಮಭ್ರಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು, ಶಿಷ್ಟನು ತಿಳಿವಳಿಕೆಯಿಂದ ಉದ್ಧಾರವಾಗುವನು.
10ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ, ದುರ್ಜನರು ಹಾಳಾದರೆ ಜಯಘೋಷ.
11ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಉನ್ನತಿಗೆ ಬರುವುದು, ಕೆಟ್ಟವರ ಬಾಯಿಂದ ಕೆಡವಲ್ಪಡುವುದು.
12ನೆರೆಯವನನ್ನು ಹೀನೈಸುವವನು ಬುದ್ಧಿಹೀನನು, ವಿವೇಕಿಯು ಮೌನವಾಗಿರುವನು.
13ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ನಂಬಿಗಸ್ತನು ಸಂಗತಿಗಳನ್ನು ಗುಪ್ತವಾಗಿಡುವನು.
14ಉಚಿತಾಲೋಚನೆಯಿಲ್ಲದ ಕಡೆ ಪ್ರಜೆಯು ಬಿದ್ದು ಹೋಗುವುದು, ಬಹು ಮಂದಿ ಸಮಾಲೋಚಕರು ಇರುವಲ್ಲಿ ಸಂರಕ್ಷಣೆ ಇರುವುದು.
15ಅನ್ಯನ ಸಾಲಕ್ಕೆ ಹೊಣೆಯಾದರೆ ಹಾನಿ, ಅಪರಿಚಿತನ ಹೊಣೆಗೆ ದೂರವಾದರೆ ನಿರ್ಭಯ.
16ದಯಾಳುವಾದ ಹೆಂಗಸು ಗೌರವವನ್ನು ಪಡೆಯುವಳು, ಬಲಾತ್ಕಾರಿಗಳು ಧನವನ್ನು ಮಾತ್ರ ಕೂಡಿಸಿಕೊಳ್ಳುವರು.
17ದಯಾಪರನಿಗೆ ಉಪಕಾರವಾಗುವುದು, ಕ್ರೂರನು ತನ್ನ ಶರೀರವನ್ನು ಹಿಂಸಿಸುವನು.
18ಅಧರ್ಮಿಯ ಸಂಬಳವು ಮೋಸ, ನೀತಿಯನ್ನು ಬಿತ್ತುವವನು ಲಾಭವನ್ನು ಪಡೆಯುವನು.
19ಧರ್ಮನಿರತನಿಗೆ ಜೀವ, ಅಧರ್ಮಾಸಕ್ತನಿಗೆ ಮರಣ.
20ವಕ್ರಹೃದಯರು ಯೆಹೋವನಿಗೆ ಅಸಹ್ಯರು, ಸನ್ಮಾರ್ಗಿಗಳು ಆತನ ದಯೆಗೆ ಪಾತ್ರರು.
21ದುಷ್ಟನಿಗೆ ದಂಡನೆ ಖಂಡಿತ, ಶಿಷ್ಟವಂಶಕ್ಕೆ ರಕ್ಷಣೆ.
22ಹಂದಿಯ ಮೂಗಿಗೆ ಚಿನ್ನದ ಮೂಗುತಿಯು ಹೇಗೋ, ಅವಿವೇಕಳಿಗೆ ಸೌಂದರ್ಯವು ಹಾಗೆ.

Read ಜ್ಞಾನೋ 11ಜ್ಞಾನೋ 11
Compare ಜ್ಞಾನೋ 11:4-22ಜ್ಞಾನೋ 11:4-22