5ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವುದು, ದುಷ್ಟನು ತನ್ನ ದೋಷದಿಂದಲೇ ಬಿದ್ದುಹೋಗುವನು.
6ಧರ್ಮವು ಯಥಾರ್ಥವಂತರನ್ನು ಉದ್ಧರಿಸುವುದು, ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು.
7ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವುದು, ಬಲದ ಮೇಲಣ ನಂಬಿಕೆಯು ಬಿದ್ದುಹೋಗುವುದು.
8ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು, ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು.
9ಧರ್ಮಭ್ರಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು, ಶಿಷ್ಟನು ತಿಳಿವಳಿಕೆಯಿಂದ ಉದ್ಧಾರವಾಗುವನು.
10ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ, ದುರ್ಜನರು ಹಾಳಾದರೆ ಜಯಘೋಷ.
11ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಉನ್ನತಿಗೆ ಬರುವುದು, ಕೆಟ್ಟವರ ಬಾಯಿಂದ ಕೆಡವಲ್ಪಡುವುದು.