13ದುಷ್ಟನು ತನ್ನ ತುಟಿಗಳ ದೋಷದಿಂದ ಬೋನಿಗೆ ಬೀಳುವನು, ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು.
14ಬಾಯಿಯ ಫಲವಾಗಿ ಮನುಷ್ಯನು ಬೇಕಾದಷ್ಟು ಸುಖವನ್ನು ಅನುಭವಿಸುವನು, ಅವನ ಕೈಕೆಲಸದ ಫಲವು ಅವನಿಗೆ ಪ್ರಾಪ್ತವಾಗುವುದು.
15ಮೂರ್ಖನ ನಡತೆ ಅವನ ದೃಷ್ಟಿಗೆ ಸರಿ, ಜ್ಞಾನಿಯು ಉಚಿತಾಲೋಚನೆಯನ್ನು ಗಮನಿಸುವನು.
16ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು, ಜಾಣನು ಅವಮಾನವನ್ನು ಮರೆಮಾಡುವನು.
17ಸತ್ಯವನ್ನಾಡುವವನು ನ್ಯಾಯವನ್ನು ತೋರ್ಪಡಿಸುವನು, ಸುಳ್ಳುಸಾಕ್ಷಿಯು ಅಸತ್ಯವನ್ನು ನುಡಿಯುವನು.
18ಕತ್ತಿ ತಿವಿದ ಹಾಗೆ ದುಡುಕಿ ಮಾತನಾಡುವವರುಂಟು, ಜ್ಞಾನವಂತರ ಮಾತು ಸ್ವಸ್ಥತೆಯನ್ನು ತರುವುದು.
19ಸತ್ಯದ ತುಟಿ ಶಾಶ್ವತ, ಸುಳ್ಳಿನ ನಾಲಿಗೆ ಕ್ಷಣಿಕ.
20ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ, ಹಿತೋಪದೇಶಕರ ಮನಸ್ಸಿನಲ್ಲಿ ಉಲ್ಲಾಸ.