Text copied!
Bibles in Kannada

ಜ್ಞಾನೋ 12:5-13 in Kannada

Help us?

ಜ್ಞಾನೋ 12:5-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಶಿಷ್ಟರ ಉದ್ದೇಶ ನ್ಯಾಯ, ದುಷ್ಟರ ಆಲೋಚನೆ ಮೋಸ.
6 ಕೆಟ್ಟವರ ಮಾತು ರಕ್ತಕ್ಕೆ ಹೊಂಚು, ಯಥಾರ್ಥವಂತರ ನುಡಿ ಪ್ರಾಣರಕ್ಷಣೆ.
7 ದುರ್ಜನರು ಕೆಡವಲ್ಪಟ್ಟು ನಿರ್ಮೂಲರಾಗುವರು, ಸಜ್ಜನರ ಮನೆಯು ಸ್ಥಿರವಾಗಿ ನಿಲ್ಲುವುದು.
8 ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು, ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು.
9 ಹೊಟ್ಟೆಗಿಲ್ಲದ ಡಾಂಭಿಕನಿಗಿಂತಲೂ ಸೇವಕನುಳ್ಳ ಸಾಧಾರಣ ಮನುಷ್ಯನ ಸ್ಥಿತಿಯೇ ಲೇಸು.
10 ಶಿಷ್ಟನು ತನ್ನ ಪಶುಗಳ ಕ್ಷೇಮವನ್ನು ಲಕ್ಷಿಸುತ್ತಾನೆ, ದುಷ್ಟನ ವಾತ್ಸಲ್ಯವೋ ಕ್ರೂರತನವೇ.
11 ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು, ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ.
12 ಕೆಡುಕರ ಕೊಳ್ಳೆಯು ದುಷ್ಟರಿಗೆ ಇಷ್ಟ, ಆದರೆ ಶಿಷ್ಟರ ಬುಡ ಫಲದಾಯಕ.
13 ದುಷ್ಟನು ತನ್ನ ತುಟಿಗಳ ದೋಷದಿಂದ ಬೋನಿಗೆ ಬೀಳುವನು, ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು.
ಜ್ಞಾನೋ 12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019