Text copied!
Bibles in Kannada

ಜ್ಞಾನೋ 13:1-11 in Kannada

Help us?

ಜ್ಞಾನೋ 13:1-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಜ್ಞಾನಿಯಾದ ಮಗನು ತಂದೆಯ ನೀತಿ ಶಿಕ್ಷಣವನ್ನು ಕೇಳುವನು, ಧರ್ಮನಿಂದಕನೋ ಗದರಿಕೆಯನ್ನು ಕೇಳನು.
2 ಬಾಯಿಯ ಫಲವಾಗಿ ಮನುಷ್ಯನು ಸುಖವನ್ನು ಅನುಭವಿಸುವನು, ಬಲಾತ್ಕಾರವೇ ದ್ರೋಹಿಗಳ ಕೋರಿಕೆ.
3 ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ, ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು.
4 ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.
5 ಶಿಷ್ಟನು ಮೋಸಕ್ಕೆ ಅಸಹ್ಯಪಟ್ಟು ಅದನ್ನು ಮಾಡಲಾರನು, ದುಷ್ಟನ ನಡತೆಯು ಹೇಸಿಕೆಗೂ, ನಾಚಿಕೆಗೂ ಆಸ್ಪದ.
6 ಧರ್ಮವು ನಿರ್ದೋಷಿಯನ್ನು ಕಾಯುವುದು, ಅಧರ್ಮವು ದೋಷಿಯನ್ನು ಕೆಡವಿಬಿಡುವುದು.
7 ಒಬ್ಬನು ಧನವನ್ನು ಸಂಗ್ರಹಿಸಿದರೂ, ಏನೂ ಇಲ್ಲದ ದರಿದ್ರನ ಹಾಗೆ ವರ್ತಿಸುತ್ತಾನೆ, ಮತ್ತೊಬ್ಬನು ಧನವನ್ನೆಲ್ಲಾ ವೆಚ್ಚಮಾಡಿ ಬಡವನಾದರೂ, ಬಹು ಐಶ್ವರ್ಯವಂತನ ಹಾಗೆ ವರ್ತಿಸುತ್ತಾನೆ.
8 ಧನವಂತನ ಪ್ರಾಣರಕ್ಷಣೆಗೆ ಅವನ ಧನವೇ ಕ್ರಯ, ಬಡವನಿಗೆ ಯಾವ ಬೆದರಿಕೆಯೂ ಇಲ್ಲ.
9 ಶಿಷ್ಟರ ಬೆಳಕು ಬೆಳಗುವುದು, ದುಷ್ಟರ ದೀಪವು ಆರುವುದು.
10 ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.
11 ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವುದು, ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವುದು.
ಜ್ಞಾನೋ 13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019