Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 13

ಜ್ಞಾನೋ 13:10-20

Help us?
Click on verse(s) to share them!
10ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.
11ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವುದು, ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವುದು.
12ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವುದು, ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು.
13ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು, ಆಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸಫಲವನ್ನು ಹೊಂದುವನು.
14ಜ್ಞಾನಿಯ ಬೋಧನೆ ಜೀವದ ಬುಗ್ಗೆ, ಅದನ್ನಾಲಿಸುವವನು ಮೃತ್ಯುಪಾಶದಿಂದ ತಪ್ಪಿಸಿಕೊಳ್ಳುವನು.
15ಸುಬುದ್ಧಿಯು ದಯಾಸ್ಪದವು, ದ್ರೋಹಿಯ ಮಾರ್ಗವು ನಾಶಕರ.
16ಪ್ರತಿಯೊಬ್ಬ ಜಾಣನು ತನ್ನ ಕೆಲಸವನ್ನು ತಿಳಿವಳಿಕೆಯಿಂದ ನಡೆಸುವನು, ಮೂಢನು ತನ್ನ ಮೂರ್ಖತನವನ್ನು ತೋರ್ಪಡಿಸುವನು.
17ಕೆಟ್ಟ ದೂತನು ಕೇಡಿಗೆ ಬೀಳುವನು, ನಂಬಿಗಸ್ತನಾದ ರಾಯಭಾರಿಯು ಕ್ಷೇಮದಾಯಕನು.
18ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ, ಗದರಿಕೆಯನ್ನು ಗಮನಿಸುವವನಿಗೆ ಮಾನ.
19ಇಷ್ಟಸಿದ್ಧಿ ಮನಸ್ಸಿಗೆ ಸಿಹಿ, ಕೆಟ್ಟದ್ದನ್ನು ಬಿಡುವುದು ಮೂಢರಿಗೆ ಕಹಿ.
20ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.

Read ಜ್ಞಾನೋ 13ಜ್ಞಾನೋ 13
Compare ಜ್ಞಾನೋ 13:10-20ಜ್ಞಾನೋ 13:10-20