2ಬಾಯಿಯ ಫಲವಾಗಿ ಮನುಷ್ಯನು ಸುಖವನ್ನು ಅನುಭವಿಸುವನು, ಬಲಾತ್ಕಾರವೇ ದ್ರೋಹಿಗಳ ಕೋರಿಕೆ.
3ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ, ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು.
4ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.
5ಶಿಷ್ಟನು ಮೋಸಕ್ಕೆ ಅಸಹ್ಯಪಟ್ಟು ಅದನ್ನು ಮಾಡಲಾರನು, ದುಷ್ಟನ ನಡತೆಯು ಹೇಸಿಕೆಗೂ, ನಾಚಿಕೆಗೂ ಆಸ್ಪದ.
6ಧರ್ಮವು ನಿರ್ದೋಷಿಯನ್ನು ಕಾಯುವುದು, ಅಧರ್ಮವು ದೋಷಿಯನ್ನು ಕೆಡವಿಬಿಡುವುದು.
7ಒಬ್ಬನು ಧನವನ್ನು ಸಂಗ್ರಹಿಸಿದರೂ, ಏನೂ ಇಲ್ಲದ ದರಿದ್ರನ ಹಾಗೆ ವರ್ತಿಸುತ್ತಾನೆ, ಮತ್ತೊಬ್ಬನು ಧನವನ್ನೆಲ್ಲಾ ವೆಚ್ಚಮಾಡಿ ಬಡವನಾದರೂ, ಬಹು ಐಶ್ವರ್ಯವಂತನ ಹಾಗೆ ವರ್ತಿಸುತ್ತಾನೆ.
8ಧನವಂತನ ಪ್ರಾಣರಕ್ಷಣೆಗೆ ಅವನ ಧನವೇ ಕ್ರಯ, ಬಡವನಿಗೆ ಯಾವ ಬೆದರಿಕೆಯೂ ಇಲ್ಲ.
9ಶಿಷ್ಟರ ಬೆಳಕು ಬೆಳಗುವುದು, ದುಷ್ಟರ ದೀಪವು ಆರುವುದು.
10ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.
11ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವುದು, ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವುದು.