16ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.
17ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುವನು, ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.
18ಮೂರ್ಖರಿಗೆ ಮೂರ್ಖತನವೇ ಸ್ವತ್ತು, ಜಾಣರಿಗೆ ಜ್ಞಾನವೇ ಕಿರೀಟ.
19ಕೆಟ್ಟವರು ಒಳ್ಳೆಯವರಿಗೆ ಬಾಗುವರು, ದುಷ್ಟರು ಶಿಷ್ಟರ ಬಾಗಿಲಲ್ಲಿ ಅಡ್ಡಬೀಳುವರು.
20ಬಡವನು ನೆರೆಯವನಿಗೂ ಅಸಹ್ಯ, ಧನವಂತನಿಗೆ ಬಹು ಜನ ಮಿತ್ರರು.
21ನೆರೆಯವನನ್ನು ತಿರಸ್ಕರಿಸುವವನು ದೋಷಿ, ದರಿದ್ರನನ್ನು ಕನಿಕರಿಸುವವನು ಧನ್ಯನು.