Text copied!
Bibles in Kannada

ಜ್ಞಾನೋ 14:17-33 in Kannada

Help us?

ಜ್ಞಾನೋ 14:17-33 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುವನು, ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.
18 ಮೂರ್ಖರಿಗೆ ಮೂರ್ಖತನವೇ ಸ್ವತ್ತು, ಜಾಣರಿಗೆ ಜ್ಞಾನವೇ ಕಿರೀಟ.
19 ಕೆಟ್ಟವರು ಒಳ್ಳೆಯವರಿಗೆ ಬಾಗುವರು, ದುಷ್ಟರು ಶಿಷ್ಟರ ಬಾಗಿಲಲ್ಲಿ ಅಡ್ಡಬೀಳುವರು.
20 ಬಡವನು ನೆರೆಯವನಿಗೂ ಅಸಹ್ಯ, ಧನವಂತನಿಗೆ ಬಹು ಜನ ಮಿತ್ರರು.
21 ನೆರೆಯವನನ್ನು ತಿರಸ್ಕರಿಸುವವನು ದೋಷಿ, ದರಿದ್ರನನ್ನು ಕನಿಕರಿಸುವವನು ಧನ್ಯನು.
22 ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ, ಒಳ್ಳೆಯದನ್ನು ಕಲ್ಪಿಸುವವರು ಪ್ರೀತಿಸತ್ಯತೆಗಳಿಗೆ ಪಾತ್ರರು.
23 ಶ್ರಮೆಯಿಂದ ಸಮೃದ್ಧಿ, ಹರಟೆಯಿಂದ ಕೊರತೆ.
24 ಜ್ಞಾನಿಗಳ ಜ್ಞಾನಕಿರೀಟವೇ ಅವರ ಶ್ರೇಷ್ಠ ಸಂಪತ್ತು, ಜ್ಞಾನಹೀನರ ಮೂರ್ಖತನವು ಬರೀ ಮೂರ್ಖತನವೇ.
25 ಸತ್ಯಸಾಕ್ಷಿಯು ಪ್ರಾಣರಕ್ಷಕ, ಸುಳ್ಳುಸಾಕ್ಷಿಯು ವಂಚಕ.
26 ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ, ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವುದು.
27 ಯೆಹೋವನ ಭಯ ಜೀವದ ಬುಗ್ಗೆ, ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನವಾಗಿದೆ.
28 ಪ್ರಜೆಗಳ ವೃದ್ಧಿ ರಾಜನ ಮಹಿಮೆ, ಪ್ರಜೆಗಳ ನಾಶ ಪ್ರಭುವಿಗೆ ಭಯ.
29 ದೀರ್ಘಶಾಂತನು ಕೇವಲ ಬುದ್ಧಿವಂತನು, ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು.
30 ಶಾಂತಗುಣವು ದೇಹಕ್ಕೆ ಜೀವಾಧಾರವು, ಕ್ರೋಧವು ಎಲುಬಿಗೆ ಕ್ಷಯವು.
31 ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.
32 ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.
33 ವಿವೇಕಿಯ ಹೃದಯ ಜ್ಞಾನಾಶ್ರಯ, ಜ್ಞಾನಹೀನನ ಹೃದಯದಲ್ಲಿ ಅದು ಕಾಣದು.
ಜ್ಞಾನೋ 14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019