Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 14

ಜ್ಞಾನೋ 14:24-34

Help us?
Click on verse(s) to share them!
24ಜ್ಞಾನಿಗಳ ಜ್ಞಾನಕಿರೀಟವೇ ಅವರ ಶ್ರೇಷ್ಠ ಸಂಪತ್ತು, ಜ್ಞಾನಹೀನರ ಮೂರ್ಖತನವು ಬರೀ ಮೂರ್ಖತನವೇ.
25ಸತ್ಯಸಾಕ್ಷಿಯು ಪ್ರಾಣರಕ್ಷಕ, ಸುಳ್ಳುಸಾಕ್ಷಿಯು ವಂಚಕ.
26ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ, ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವುದು.
27ಯೆಹೋವನ ಭಯ ಜೀವದ ಬುಗ್ಗೆ, ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನವಾಗಿದೆ.
28ಪ್ರಜೆಗಳ ವೃದ್ಧಿ ರಾಜನ ಮಹಿಮೆ, ಪ್ರಜೆಗಳ ನಾಶ ಪ್ರಭುವಿಗೆ ಭಯ.
29ದೀರ್ಘಶಾಂತನು ಕೇವಲ ಬುದ್ಧಿವಂತನು, ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು.
30ಶಾಂತಗುಣವು ದೇಹಕ್ಕೆ ಜೀವಾಧಾರವು, ಕ್ರೋಧವು ಎಲುಬಿಗೆ ಕ್ಷಯವು.
31ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.
32ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.
33ವಿವೇಕಿಯ ಹೃದಯ ಜ್ಞಾನಾಶ್ರಯ, ಜ್ಞಾನಹೀನನ ಹೃದಯದಲ್ಲಿ ಅದು ಕಾಣದು.
34ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ.

Read ಜ್ಞಾನೋ 14ಜ್ಞಾನೋ 14
Compare ಜ್ಞಾನೋ 14:24-34ಜ್ಞಾನೋ 14:24-34