Text copied!
Bibles in Kannada

ಜ್ಞಾನೋ 14:25-34 in Kannada

Help us?

ಜ್ಞಾನೋ 14:25-34 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸತ್ಯಸಾಕ್ಷಿಯು ಪ್ರಾಣರಕ್ಷಕ, ಸುಳ್ಳುಸಾಕ್ಷಿಯು ವಂಚಕ.
26 ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ, ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವುದು.
27 ಯೆಹೋವನ ಭಯ ಜೀವದ ಬುಗ್ಗೆ, ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನವಾಗಿದೆ.
28 ಪ್ರಜೆಗಳ ವೃದ್ಧಿ ರಾಜನ ಮಹಿಮೆ, ಪ್ರಜೆಗಳ ನಾಶ ಪ್ರಭುವಿಗೆ ಭಯ.
29 ದೀರ್ಘಶಾಂತನು ಕೇವಲ ಬುದ್ಧಿವಂತನು, ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು.
30 ಶಾಂತಗುಣವು ದೇಹಕ್ಕೆ ಜೀವಾಧಾರವು, ಕ್ರೋಧವು ಎಲುಬಿಗೆ ಕ್ಷಯವು.
31 ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.
32 ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.
33 ವಿವೇಕಿಯ ಹೃದಯ ಜ್ಞಾನಾಶ್ರಯ, ಜ್ಞಾನಹೀನನ ಹೃದಯದಲ್ಲಿ ಅದು ಕಾಣದು.
34 ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ.
ಜ್ಞಾನೋ 14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019