6ಧರ್ಮನಿಂದಕನಲ್ಲಿ ಹುಡುಕಿದರೂ ಜ್ಞಾನವು ಸಿಕ್ಕದು, ವಿವೇಕಿಗೆ ತಿಳಿವಳಿಕೆಯು ಸುಲಭವಾಗಿ ದೊರೆಯುವುದು.
7ನೀನು ಜ್ಞಾನಹೀನನ ಬಳಿಗೆ ಹೋದರೆ ಅವನ ತುಟಿಗಳಲ್ಲಿ ಯಾವ ತಿಳಿವಳಿಕೆಯನ್ನೂ ಕಾಣಲಾರೆ.
8ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ.
9ಮೂರ್ಖರನ್ನು ಅವರ ದೋಷವೇ ಹಾಸ್ಯಮಾಡುವುದು, ಯಥಾರ್ಥವಂತರಲ್ಲಿ (ದೇವರ) ದಯೆಯಿರುವುದು.
10ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು, ಅವನ ಆನಂದದಲ್ಲಿಯೂ ಬೇರೆಯವರು ಪಾಲುಗಾರರಾಗುವುದಿಲ್ಲ.
11ದುಷ್ಟರ ಮನೆಗೆ ನಾಶನ, ಶಿಷ್ಟರ ಗುಡಾರಕ್ಕೆ ಏಳಿಗೆ.
12ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.
13ನಗುವವನಿಗೂ ಮನೋವ್ಯಥೆಯುಂಟು, ಉಲ್ಲಾಸದ ಅಂತ್ಯವು ವ್ಯಾಕುಲವೇ.