Text copied!
Bibles in Kannada

ಜ್ಞಾನೋ 14:8-19 in Kannada

Help us?

ಜ್ಞಾನೋ 14:8-19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ.
9 ಮೂರ್ಖರನ್ನು ಅವರ ದೋಷವೇ ಹಾಸ್ಯಮಾಡುವುದು, ಯಥಾರ್ಥವಂತರಲ್ಲಿ (ದೇವರ) ದಯೆಯಿರುವುದು.
10 ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು, ಅವನ ಆನಂದದಲ್ಲಿಯೂ ಬೇರೆಯವರು ಪಾಲುಗಾರರಾಗುವುದಿಲ್ಲ.
11 ದುಷ್ಟರ ಮನೆಗೆ ನಾಶನ, ಶಿಷ್ಟರ ಗುಡಾರಕ್ಕೆ ಏಳಿಗೆ.
12 ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.
13 ನಗುವವನಿಗೂ ಮನೋವ್ಯಥೆಯುಂಟು, ಉಲ್ಲಾಸದ ಅಂತ್ಯವು ವ್ಯಾಕುಲವೇ.
14 ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು, ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.
15 ಮೂಢನು ಯಾವ ಮಾತನ್ನಾದರೂ ನಂಬುವನು, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.
16 ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.
17 ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುವನು, ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.
18 ಮೂರ್ಖರಿಗೆ ಮೂರ್ಖತನವೇ ಸ್ವತ್ತು, ಜಾಣರಿಗೆ ಜ್ಞಾನವೇ ಕಿರೀಟ.
19 ಕೆಟ್ಟವರು ಒಳ್ಳೆಯವರಿಗೆ ಬಾಗುವರು, ದುಷ್ಟರು ಶಿಷ್ಟರ ಬಾಗಿಲಲ್ಲಿ ಅಡ್ಡಬೀಳುವರು.
ಜ್ಞಾನೋ 14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019