1ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.
2ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.
3ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವುದು, ಆತನು ಕೆಟ್ಟವರನ್ನು ಮತ್ತು ಒಳ್ಳೆಯವರನ್ನು ನೋಡುತ್ತಲೇ ಇರುವನು.
4ಸಂತೈಸುವ ನಾಲಿಗೆ ಜೀವವೃಕ್ಷವು, ಬಲತ್ಕರಿಸುವ ನಾಲಿಗೆ ಮನಮುರಿಯುವುದು.
5ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು, ಗದರಿಕೆಯನ್ನು ಗಮನಿಸುವವನು ಜಾಣನು.