Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 15

ಜ್ಞಾನೋ 15:1-6

Help us?
Click on verse(s) to share them!
1ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.
2ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.
3ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವುದು, ಆತನು ಕೆಟ್ಟವರನ್ನು ಮತ್ತು ಒಳ್ಳೆಯವರನ್ನು ನೋಡುತ್ತಲೇ ಇರುವನು.
4ಸಂತೈಸುವ ನಾಲಿಗೆ ಜೀವವೃಕ್ಷವು, ಬಲತ್ಕರಿಸುವ ನಾಲಿಗೆ ಮನಮುರಿಯುವುದು.
5ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು, ಗದರಿಕೆಯನ್ನು ಗಮನಿಸುವವನು ಜಾಣನು.
6ಶಿಷ್ಟನ ಮನೆಯಲ್ಲಿ ದೊಡ್ಡ ನಿಧಿ, ದುಷ್ಟನ ಆದಾಯವು ನಷ್ಟಕ್ಕೆ ದಾರಿ.

Read ಜ್ಞಾನೋ 15ಜ್ಞಾನೋ 15
Compare ಜ್ಞಾನೋ 15:1-6ಜ್ಞಾನೋ 15:1-6