Text copied!
Bibles in Kannada

ಜ್ಞಾನೋ 15:11-20 in Kannada

Help us?

ಜ್ಞಾನೋ 15:11-20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಪಾತಾಳವೂ, ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ ನರವಂಶದವರ ಹೃದಯಗಳು ಆತನಿಗೆ ಮತ್ತೂ ಸ್ಪಷ್ಟ.
12 ಧರ್ಮನಿಂದಕನು ಗದರಿಕೆಯನ್ನು ಕೇಳನು, ಜ್ಞಾನಿಗಳ ಸಂಗಡ ಸೇರನು.
13 ಹರ್ಷ ಹೃದಯದಿಂದ ಹಸನ್ಮುಖ, ಮನೋವ್ಯಥೆಯಿಂದ ಆತ್ಮಭಂಗ.
14 ವಿವೇಕಿಯ ಹೃದಯ ತಿಳಿವಳಿಕೆಯನ್ನು ಹುಡುಕುವುದು, ಮೂಢರ ಬಾಯಿ ಮೂರ್ಖತನವನ್ನು ಮುಕ್ಕುವುದು.
15 ದೀನನ ದಿನಗಳೆಲ್ಲಾ ದುಃಖಭರಿತ, ಹರ್ಷಹೃದಯನಿಗೆ ನಿತ್ಯವೂ ಔತಣ.
16 ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪ ಧನವೇ ಲೇಸು.
17 ದ್ವೇಷವಿರುವಲ್ಲಿ ಮೃಷ್ಟಾನ್ನಕ್ಕಿಂತಲೂ, ಪ್ರೇಮವಿರುವಲ್ಲಿ ಸೊಪ್ಪಿನ ಊಟವೇ ಉತ್ತಮ.
18 ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.
19 ಸೋಮಾರಿಯ ಮಾರ್ಗ ಮುಳ್ಳುಬೇಲಿ, ಯಥಾರ್ಥವಂತನ ಮಾರ್ಗ ರಾಜಮಾರ್ಗ.
20 ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು, ಜ್ಞಾನಹೀನನು ತಾಯಿಯನ್ನು ತಿರಸ್ಕರಿಸುವನು.
ಜ್ಞಾನೋ 15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019