14ವಿವೇಕಿಯ ಹೃದಯ ತಿಳಿವಳಿಕೆಯನ್ನು ಹುಡುಕುವುದು, ಮೂಢರ ಬಾಯಿ ಮೂರ್ಖತನವನ್ನು ಮುಕ್ಕುವುದು.
15ದೀನನ ದಿನಗಳೆಲ್ಲಾ ದುಃಖಭರಿತ, ಹರ್ಷಹೃದಯನಿಗೆ ನಿತ್ಯವೂ ಔತಣ.
16ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪ ಧನವೇ ಲೇಸು.
17ದ್ವೇಷವಿರುವಲ್ಲಿ ಮೃಷ್ಟಾನ್ನಕ್ಕಿಂತಲೂ, ಪ್ರೇಮವಿರುವಲ್ಲಿ ಸೊಪ್ಪಿನ ಊಟವೇ ಉತ್ತಮ.
18ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.
19ಸೋಮಾರಿಯ ಮಾರ್ಗ ಮುಳ್ಳುಬೇಲಿ, ಯಥಾರ್ಥವಂತನ ಮಾರ್ಗ ರಾಜಮಾರ್ಗ.
20ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು, ಜ್ಞಾನಹೀನನು ತಾಯಿಯನ್ನು ತಿರಸ್ಕರಿಸುವನು.
21ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುವನು, ಬುದ್ಧಿವಂತನು ತನ್ನ ಮಾರ್ಗವನ್ನು ಸರಳಮಾಡಿಕೊಳ್ಳುವನು.
22ಆಲೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, ಬಹು ಮಂದಿ ಆಲೋಚನಾಪರರು ಇರುವಲ್ಲಿ ಅವು ನೆರವೇರುವವು.
23ತಕ್ಕ ಉತ್ತರಕೊಡುವವನಿಗೆ ಎಷ್ಟೋ ಸಂತೋಷ! ಸಮಯೋಚಿತವಾದ ನುಡಿಯಲ್ಲಿ ಎಷ್ಟೋ ಸ್ವಾರಸ್ಯ!