22ಆಲೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, ಬಹು ಮಂದಿ ಆಲೋಚನಾಪರರು ಇರುವಲ್ಲಿ ಅವು ನೆರವೇರುವವು.
23ತಕ್ಕ ಉತ್ತರಕೊಡುವವನಿಗೆ ಎಷ್ಟೋ ಸಂತೋಷ! ಸಮಯೋಚಿತವಾದ ನುಡಿಯಲ್ಲಿ ಎಷ್ಟೋ ಸ್ವಾರಸ್ಯ!
24ಜೀವದ ಮಾರ್ಗವು ವಿವೇಕಿಯನ್ನು ಮೇಲಕ್ಕೆತ್ತುವುದು; ಅದು ಅವನನ್ನು ಪಾತಾಳದಿಂದ ತಪ್ಪಿಸುವುದು.
25ಯೆಹೋವನು ಗರ್ವಿಷ್ಠನ ಮನೆಯನ್ನು ಕೆಡವಿಬಿಡುವನು; ವಿಧವೆಯ ಮೇರೆಯನ್ನು ನೆಲೆಗೊಳಿಸುವನು.
26ಕುಯುಕ್ತಿಯು ಯೆಹೋವನಿಗೆ ಅಸಹ್ಯ, ನಯನುಡಿಯು ಆತನಿಗೆ ಪ್ರಿಯ.
27ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.
28ಶಿಷ್ಟನ ಹೃದಯ ವಿವೇಚಿಸಿ ಉತ್ತರಕೊಡುತ್ತದೆ, ದುಷ್ಟನ ಬಾಯಿ ಕೆಟ್ಟದ್ದನ್ನು ಕಾರುತ್ತದೆ.
29ಯೆಹೋವನು ದುಷ್ಟರಿಗೆ ದೂರ, ಶಿಷ್ಟರ ಬಿನ್ನಹಕ್ಕೆ ಹತ್ತಿರ.
30ಹಸನ್ಮುಖ ಹೃದಯಕ್ಕೆ ಆನಂದ, ಶುಭಸಮಾಚಾರ ದೇಹಕ್ಕೆ ಆರೋಗ್ಯ.