3ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವುದು, ಆತನು ಕೆಟ್ಟವರನ್ನು ಮತ್ತು ಒಳ್ಳೆಯವರನ್ನು ನೋಡುತ್ತಲೇ ಇರುವನು.
4ಸಂತೈಸುವ ನಾಲಿಗೆ ಜೀವವೃಕ್ಷವು, ಬಲತ್ಕರಿಸುವ ನಾಲಿಗೆ ಮನಮುರಿಯುವುದು.
5ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು, ಗದರಿಕೆಯನ್ನು ಗಮನಿಸುವವನು ಜಾಣನು.
6ಶಿಷ್ಟನ ಮನೆಯಲ್ಲಿ ದೊಡ್ಡ ನಿಧಿ, ದುಷ್ಟನ ಆದಾಯವು ನಷ್ಟಕ್ಕೆ ದಾರಿ.
7ಜ್ಞಾನಿಗಳ ತುಟಿಗಳು ತಿಳಿವಳಿಕೆಯನ್ನು ಬಿತ್ತುವವು. ಜ್ಞಾನಹೀನರ ಹೃದಯವು ಅದನ್ನು ಬಿತ್ತುವುದೇ ಇಲ್ಲ.
8ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.
9ದುಷ್ಟನ ನಡತೆಯು ಯೆಹೋವನಿಗೆ ಅಸಹ್ಯ, ಧರ್ಮಾಸಕ್ತನು ಆತನಿಗೆ ಪ್ರಿಯ.