8ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.
9ದುಷ್ಟನ ನಡತೆಯು ಯೆಹೋವನಿಗೆ ಅಸಹ್ಯ, ಧರ್ಮಾಸಕ್ತನು ಆತನಿಗೆ ಪ್ರಿಯ.
10ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ, ಗದರಿಕೆಯನ್ನು ಕೇಳದವನಿಗೆ ಸಾವು.
11ಪಾತಾಳವೂ, ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ ನರವಂಶದವರ ಹೃದಯಗಳು ಆತನಿಗೆ ಮತ್ತೂ ಸ್ಪಷ್ಟ.
12ಧರ್ಮನಿಂದಕನು ಗದರಿಕೆಯನ್ನು ಕೇಳನು, ಜ್ಞಾನಿಗಳ ಸಂಗಡ ಸೇರನು.
13ಹರ್ಷ ಹೃದಯದಿಂದ ಹಸನ್ಮುಖ, ಮನೋವ್ಯಥೆಯಿಂದ ಆತ್ಮಭಂಗ.
14ವಿವೇಕಿಯ ಹೃದಯ ತಿಳಿವಳಿಕೆಯನ್ನು ಹುಡುಕುವುದು, ಮೂಢರ ಬಾಯಿ ಮೂರ್ಖತನವನ್ನು ಮುಕ್ಕುವುದು.
15ದೀನನ ದಿನಗಳೆಲ್ಲಾ ದುಃಖಭರಿತ, ಹರ್ಷಹೃದಯನಿಗೆ ನಿತ್ಯವೂ ಔತಣ.