Text copied!
Bibles in Kannada

ಜ್ಞಾನೋ 16:17-28 in Kannada

Help us?

ಜ್ಞಾನೋ 16:17-28 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸತ್ಯವಂತನ ರಾಜಮಾರ್ಗ ಹಾನಿಗೆ ದೂರ, ತನ್ನ ನಡತೆಯನ್ನು ಗಮನಿಸುವವನು ತನ್ನ ಆತ್ಮವನ್ನು ಕಾಯುವನು.
18 ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು.
19 ಸೊಕ್ಕಿನವರ ಸಂಗಡ ಸೂರೆಯನ್ನು ಹಂಚಿಕೊಳ್ಳುವುದಕ್ಕಿಂತಲೂ, ದೀನರ ಸಂಗಡ ದೈನ್ಯದಿಂದಿರುವುದು ವಾಸಿ.
20 ದೇವರ ವಾಕ್ಯವನ್ನು ಸ್ಮರಿಸುವವನು ಸುಕ್ಷೇಮವನ್ನು ಪಡೆಯುವನು, ಯೆಹೋವನಲ್ಲಿ ಭರವಸವಿಡುವವನು ಭಾಗ್ಯವಂತನು.
21 ಜ್ಞಾನಹೃದಯರಿಗೆ ಜಾಣರೆಂಬ ಬಿರುದು ಬರುವುದು, ಸವಿತುಟಿಯಿಂದ ಉಪದೇಶ ಶಕ್ತಿಯು ಹೆಚ್ಚುವುದು.
22 ವಿವೇಕಿಗೆ ವಿವೇಕವೇ ಜೀವದ ಬುಗ್ಗೆ, ಮೂರ್ಖನಿಗೆ ಮೂರ್ಖತನವೇ ದಂಡನೆ.
23 ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ, ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವುದು.
24 ಸವಿನುಡಿಯು ಜೇನುಕೊಡ, ಅದು ಆತ್ಮಕ್ಕೆ ಸಿಹಿ, ಎಲುಬಿಗೆ ಕ್ಷೇಮ.
25 ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು, ಕಟ್ಟಕಡೆಗೆ ಅದು ಮರಣಮಾರ್ಗವೇ.
26 ದುಡಿಯುವವನಿಗೆ ಅವನ ಹೊಟ್ಟೆಯೇ ದುಡಿಯುವಂತೆ ಮಾಡುವುದು, ದುಡಿಯಲಿಕ್ಕೆ ಅವನ ಬಾಯೇ ಅವನನ್ನು ಒತ್ತಾಯ ಮಾಡುವುದು.
27 ನೀಚನು ಕೇಡೆಂಬ ಕುಣಿಯನ್ನು ತೋಡುತ್ತಾನೆ, ಅವನ ಮಾತುಗಳು ಬೆಂಕಿಯ ಉರಿಯಂತಿದೆ.
28 ತುಂಟನು ಜಗಳ ಬಿತ್ತುತ್ತಾನೆ, ಚಾಡಿಕೋರನು ಮಿತ್ರರನ್ನು ಅಗಲಿಸುತ್ತಾನೆ.
ಜ್ಞಾನೋ 16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019