Text copied!
Bibles in Kannada

ಜ್ಞಾನೋ 17:8-19 in Kannada

Help us?

ಜ್ಞಾನೋ 17:8-19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕೊಡುವವನ ದೃಷ್ಟಿಗೆ ಲಂಚವು ಚಿಂತಾಮಣಿಯಾಗಿದೆ, ಎಲ್ಲಿ ಹೋದರೂ ಅವನಿಗೆ ಅನುಕೂಲವೇ.
9 ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು, ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು.
10 ಮಂದಮತಿಗೆ ನೂರು ಪೆಟ್ಟು ಹೊಡೆಯುವುದಕ್ಕಿಂತಲೂ, ಗದರಿಕೆಯೇ ವಿವೇಕಿಗೆ ಹೆಚ್ಚಾದ ಶಿಕ್ಷೆ.
11 ದುರಾತ್ಮನಿಗೆ ದಂಗೆಯ ಮೇಲೆಯೇ ಮನಸ್ಸು, ಕ್ರೂರದೂತನು ಅವನನ್ನು ಆಕ್ರಮಿಸುವನು.
12 ಮೂರ್ಖತನದಲ್ಲಿ ಮುಳುಗಿರುವ ಮೂಢನನ್ನು ಎದುರಾಗುವುದಕ್ಕಿಂತಲೂ, ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಎದುರಾಗುವುದು ಲೇಸು.
13 ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡು ತಪ್ಪದು.
14 ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.
15 ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.
16 ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ.
17 ಮಿತ್ರನ ಪ್ರೀತಿಯು ನಿರಂತರ, ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.
18 ನೆರೆಯವನಿಗಾಗಿ ಪ್ರಮಾಣಮಾಡಿ ಹೊಣೆಯಾದವನು ಬುದ್ಧಿಹೀನನೇ ಸರಿ.
19 ಪಾಪಪ್ರಿಯನು ಕಲಹಪ್ರಿಯ, ಸೊಕ್ಕಿನಿಂದ ಮಾತನಾಡುವವನು ಕೇಡು ಬರಮಾಡಿಕೊಳ್ಳುವನು.
ಜ್ಞಾನೋ 17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019