Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 18

ಜ್ಞಾನೋ 18:10-18

Help us?
Click on verse(s) to share them!
10ಯೆಹೋವನ ನಾಮವು ಬಲವಾದ ಬುರುಜು, ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.
11ಧನವಂತನು ತನ್ನ ಐಶ್ವರ್ಯವನ್ನು ಬಲವಾದ ಕೋಟೆಯೆಂದು, ಎತ್ತರವಾದ ಗೋಡೆಯೆಂದು ಭಾವಿಸಿಕೊಳ್ಳುತ್ತಾನೆ.
12ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ.
13ಗಮನಿಸದೆ ಉತ್ತರಕೊಡುವವನು, ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು.
14ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು, ಆತ್ಮವೇ ನೊಂದರೆ ಸಹಿಸುವವರು ಯಾರು?
15ವಿವೇಕಿಯ ಹೃದಯವು ತಿಳಿವಳಿಕೆಯನ್ನು ಸಂಪಾದಿಸುವುದು, ಜ್ಞಾನಿಯ ಕಿವಿಯು ತಿಳಿವಳಿಕೆಯನ್ನು ಹುಡುಕುವುದು.
16ಕಾಣಿಕೆಯು ಅನುಕೂಲತೆಗೂ, ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ.
17ಮೊದಲು ವಾದಿಸುವವನು ನ್ಯಾಯವಾದಿ ಎಂದು ತೋರುವನು, ಪ್ರತಿವಾದಿ ಎದ್ದ ಮೇಲೆ ಅವನ ಪರೀಕ್ಷೆ ಆಗುವುದು.
18ಚೀಟು ಹಾಕುವುದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವುದು.

Read ಜ್ಞಾನೋ 18ಜ್ಞಾನೋ 18
Compare ಜ್ಞಾನೋ 18:10-18ಜ್ಞಾನೋ 18:10-18