Text copied!
Bibles in Kannada

ಜ್ಞಾನೋ 18:11-23 in Kannada

Help us?

ಜ್ಞಾನೋ 18:11-23 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಧನವಂತನು ತನ್ನ ಐಶ್ವರ್ಯವನ್ನು ಬಲವಾದ ಕೋಟೆಯೆಂದು, ಎತ್ತರವಾದ ಗೋಡೆಯೆಂದು ಭಾವಿಸಿಕೊಳ್ಳುತ್ತಾನೆ.
12 ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ.
13 ಗಮನಿಸದೆ ಉತ್ತರಕೊಡುವವನು, ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು.
14 ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು, ಆತ್ಮವೇ ನೊಂದರೆ ಸಹಿಸುವವರು ಯಾರು?
15 ವಿವೇಕಿಯ ಹೃದಯವು ತಿಳಿವಳಿಕೆಯನ್ನು ಸಂಪಾದಿಸುವುದು, ಜ್ಞಾನಿಯ ಕಿವಿಯು ತಿಳಿವಳಿಕೆಯನ್ನು ಹುಡುಕುವುದು.
16 ಕಾಣಿಕೆಯು ಅನುಕೂಲತೆಗೂ, ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ.
17 ಮೊದಲು ವಾದಿಸುವವನು ನ್ಯಾಯವಾದಿ ಎಂದು ತೋರುವನು, ಪ್ರತಿವಾದಿ ಎದ್ದ ಮೇಲೆ ಅವನ ಪರೀಕ್ಷೆ ಆಗುವುದು.
18 ಚೀಟು ಹಾಕುವುದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವುದು.
19 ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಅನ್ಯಾಯಹೊಂದಿದ ಸಹೋದರನನ್ನು ಗೆಲ್ಲುವುದು ಅಸಾಧ್ಯ, ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ.
20 ಮನುಷ್ಯನು ತನ್ನ ಬಾಯಿಯ ಬೆಳೆಯನ್ನು ಹೊಟ್ಟೆ ತುಂಬಾ ಉಣ್ಣುವನು, ತನ್ನ ತುಟಿಗಳ ಫಲವನ್ನು ಸಾಕಷ್ಟು ತಿನ್ನುವನು.
21 ಜೀವ ಮತ್ತು ಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು,
22 ಪತ್ನಿಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ.
23 ಬಡವನು ಬಿನ್ನೈಸುವನು, ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು.
ಜ್ಞಾನೋ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019