12ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ.
13ಗಮನಿಸದೆ ಉತ್ತರಕೊಡುವವನು, ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು.
14ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು, ಆತ್ಮವೇ ನೊಂದರೆ ಸಹಿಸುವವರು ಯಾರು?
15ವಿವೇಕಿಯ ಹೃದಯವು ತಿಳಿವಳಿಕೆಯನ್ನು ಸಂಪಾದಿಸುವುದು, ಜ್ಞಾನಿಯ ಕಿವಿಯು ತಿಳಿವಳಿಕೆಯನ್ನು ಹುಡುಕುವುದು.
16ಕಾಣಿಕೆಯು ಅನುಕೂಲತೆಗೂ, ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ.