Text copied!
Bibles in Kannada

ಜ್ಞಾನೋ 18:16-21 in Kannada

Help us?

ಜ್ಞಾನೋ 18:16-21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕಾಣಿಕೆಯು ಅನುಕೂಲತೆಗೂ, ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ.
17 ಮೊದಲು ವಾದಿಸುವವನು ನ್ಯಾಯವಾದಿ ಎಂದು ತೋರುವನು, ಪ್ರತಿವಾದಿ ಎದ್ದ ಮೇಲೆ ಅವನ ಪರೀಕ್ಷೆ ಆಗುವುದು.
18 ಚೀಟು ಹಾಕುವುದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವುದು.
19 ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಅನ್ಯಾಯಹೊಂದಿದ ಸಹೋದರನನ್ನು ಗೆಲ್ಲುವುದು ಅಸಾಧ್ಯ, ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ.
20 ಮನುಷ್ಯನು ತನ್ನ ಬಾಯಿಯ ಬೆಳೆಯನ್ನು ಹೊಟ್ಟೆ ತುಂಬಾ ಉಣ್ಣುವನು, ತನ್ನ ತುಟಿಗಳ ಫಲವನ್ನು ಸಾಕಷ್ಟು ತಿನ್ನುವನು.
21 ಜೀವ ಮತ್ತು ಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು,
ಜ್ಞಾನೋ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019