Text copied!
Bibles in Kannada

ಜ್ಞಾನೋ 18:8-14 in Kannada

Help us?

ಜ್ಞಾನೋ 18:8-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಹೊಟ್ಟೆಯೊಳಕ್ಕೇ ಇಳಿಯುವವು.
9 ಕೆಲಸಗಳ್ಳನು ಕೆಡುಕನಿಗೆ ತಮ್ಮ.
10 ಯೆಹೋವನ ನಾಮವು ಬಲವಾದ ಬುರುಜು, ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.
11 ಧನವಂತನು ತನ್ನ ಐಶ್ವರ್ಯವನ್ನು ಬಲವಾದ ಕೋಟೆಯೆಂದು, ಎತ್ತರವಾದ ಗೋಡೆಯೆಂದು ಭಾವಿಸಿಕೊಳ್ಳುತ್ತಾನೆ.
12 ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ.
13 ಗಮನಿಸದೆ ಉತ್ತರಕೊಡುವವನು, ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು.
14 ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು, ಆತ್ಮವೇ ನೊಂದರೆ ಸಹಿಸುವವರು ಯಾರು?
ಜ್ಞಾನೋ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019