Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 19

ಜ್ಞಾನೋ 19:13-29

Help us?
Click on verse(s) to share them!
13ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಜಗಳವಾಡುವ ಹೆಂಡತಿಯು ತಟತಟನೆ ತೊಟ್ಟಿಕ್ಕುವ ಹನಿ.
14ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು, ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.
15ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು.
16ಆಜ್ಞೆಯನ್ನು ಪಾಲಿಸುವವನು ಆತ್ಮವನ್ನು ಪಾಲಿಸುವನು, ನಡತೆಯನ್ನು ಲಕ್ಷಿಸದವನು ಸಾಯುವನು.
17ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.
18ಬುದ್ಧಿ ಬರುವುದೆಂಬ ನಿರೀಕ್ಷೆಯಿಂದ ಮಗನನ್ನು ಶಿಕ್ಷಿಸು, ಹಾಳುಮಾಡಲು ಮನಸ್ಸು ಮಾಡಬೇಡ,
19ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ, ಬಿಡಿಸಿದರೆ ಪ್ರತಿಬಾರಿಯೂ ಬಿಡಿಸಬೇಕಾಗುವುದು.
20ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.
21ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.
22ಮನುಷ್ಯನು ತನ್ನ ಹೃದಯದಲ್ಲಿ ಬಯಸುವಂಥದ್ದು ನಿಷ್ಠೆಯಾಗಿದೆ, ಬಡವನಾಗಿರುವುದು ಉತ್ತಮ.
23ಯೆಹೋವನ ಭಯವು ಜೀವದಾಯಕವು, ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು, ಅವನಿಗೆ ಕೇಡು ಸಂಭವಿಸದು.
24ಮೈಗಳ್ಳನು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರಕ್ಕೆ ತರಲಾರನು.
25ಧರ್ಮನಿಂದಕನಿಗೆ ಪೆಟ್ಟುಹೊಡೆ, ನೋಡಿದ ಅವಿವೇಕಿ ಜಾಣನಾಗುವನು, ವಿವೇಕಿಯನ್ನು ಗದರಿಸು, ತಾನೇ ತಿಳಿವಳಿಕೆಯನ್ನು ಗ್ರಹಿಸುವನು.
26ತಂದೆಯನ್ನು ಹೊಡೆದು, ತಾಯಿಯನ್ನು ಓಡಿಸುವ ಮಗನು, ನಾಚಿಕೆಯನ್ನು ಮತ್ತು ಅವಮಾನವನ್ನು ಉಂಟುಮಾಡುವನು.
27ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ, ಉಪದೇಶ ಕೇಳುವುದನ್ನೇ ಬಿಟ್ಟುಬಿಡು.
28ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು, ದುಷ್ಟರ ಬಾಯಿ ದ್ರೋಹವನ್ನು ಆತುರದಿಂದ ನುಂಗುವುದು.
29ಧರ್ಮನಿಂದಕರಿಗೆ ದಂಡನೆಯ ತೀರ್ಪು ಸಿದ್ಧ, ಮೂಢರ ಬೆನ್ನಿಗೆ ಪೆಟ್ಟು ಖಂಡಿತ.

Read ಜ್ಞಾನೋ 19ಜ್ಞಾನೋ 19
Compare ಜ್ಞಾನೋ 19:13-29ಜ್ಞಾನೋ 19:13-29